ಈಜು ಸ್ಪರ್ಧೆ : ಭುವನೇಂದ್ರದ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಉಡುಪಿ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆ. 28 ರಂದು ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ದಿಲನ್ ಜುಡೆ ಪಯಾಸ್ ಅವರು 100 ಮೀ. ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀ. ಫ್ರೀಸ್ಟೈಲ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.

















































































error: Content is protected !!
Scroll to Top