ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಇಂದು ದೂರು ನೀಡಿದ್ದಾರೆ.

ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿಯವರು ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವೈಟ್ನರ್ ಹಿಂದಿನ ಪದಗಳನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಎಂ.ಲಕ್ಷ್ಮಣ್ ಹಾಗೂ ಪಾರ್ವತಿ ಸಂಚು ರೂಪಿಸಿ ಸುಳ್ಳು ಪತ್ರ ಸೃಷ್ಟಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಪಾರ್ವತಿ ಸಹಿಯಲ್ಲಿ ಒಟ್ಟು ಒಂಬತ್ತು ವ್ಯತ್ಯಾಸಗಳನ್ನು ದೂರುದಾರರು ಗುರುತಿಸಿದ್ದಾರೆ.







































































error: Content is protected !!
Scroll to Top