ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ಸಂಭವಿಸಿದೆ. ರವೀಂದ್ರ (75) ನೇಣಿಗೆ ಶರಣಾದವರು. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗಿರುವುದಿಲ್ಲ. ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆ. 26ರ ರಾತ್ರಿ 10 ಗಂಟೆಯಿಂದ ಆ. 27ರ ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ಚಾರ ಗ್ರಾಮದ ಕಾರಾಡಿ ಎಂಬಲ್ಲಿರುವ ಮನೆಯ ಕೊಟ್ಟಿಗೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.































































error: Content is protected !!
Scroll to Top