ಈಜು ಸ್ಪರ್ಧೆ : ಕ್ರೈಸ್ಟ್‌ಕಿಂಗ್‌ನ ಆರ್ಯನ್ ರಾಜ್ಯ ಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್. ಕೋಟ್ಯಾನ್ 400 ಮೀ ಫ್ರೀ ಸ್ಟೈಲ್‌ನಲ್ಲಿ ಪ್ರಥಮ ಹಾಗೂ 200 ಮೀ ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಆರ್ಯನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸ್ಪರ್ಧೆಯ 100 ಮೀ ಫ್ರೀ ಸ್ಟೈಲ್‌ನಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಸಾರ್ಥಕ್ ಶೆಟ್ಟಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.















































error: Content is protected !!
Scroll to Top