ಚೆಸ್ ಪಂದ್ಯಾಟ : ಜ್ಞಾನಸುಧಾದ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ. ಪೂ.ಕಾಲೇಜು ಕೋಟೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ ಸ್ಥಾನವನ್ನು, ನಿಹಾರ್ ಜೆ.ಎಸ್ ಚತುರ್ಥ ಸ್ಥಾನವನ್ನು, ಸಾತ್ವಿಕ್‌ಬಿ. ಆಚಾರ್ಯ5ನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ದೈ.ಶಿ.ನಿರ್ದೇಶಕಿ ಶ್ರೀಮತಿ ಸೌಜನ್ಯ ಹೆಗ್ಡೆ ಮಾರ್ಗದರ್ಶನ ನೀಡಿದ್ದರು.

ಉಡುಪಿ ಜ್ಞಾನಸುಧಾ
ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ನಿಖಿಲ್ ವಿಕ್ರಮ್‌ ಕೆ.ಎಸ್‌. ಪ್ರಥಮ ಸ್ಥಾನ ಹಾಗೂ ಪ್ರಥಮ ಪಿ.ಯುಸಿ.ಯ ಮಿಥಾಲಿ ಶೆಟ್ಟಿ 5ನೇ ಸ್ಥಾನ ಪಡೆದಿದ್ದಾರೆ. ತನ್ಮೂಲಕ ಈ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

































































































error: Content is protected !!
Scroll to Top