ಕಾರ್ಕಳ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಚುನಾವಣೆಗೆ ಕ್ಷಣಗಣನೆ

ಕಾರ್ಕಳ : ಕಾರ್ಕಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು (ಆ. 30) ಮಧ್ಯಾಹ್ನ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಯೋಗೀಶ್‌ ದೇವಾಡಿಗ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್‌ ಕೋಟ್ಯಾನ್‌, ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ಶುಭದ ರಾವ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಿನ್ನಿಬೋಲ್ಡ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದ್ದು, ತಹಶೀಲ್ದಾರ್‌ ಪ್ರತಿಭಾ ಆರ್‌. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಧ್ಯಕ್ಷ ಹಾಗೂ ಉಪಾ‍ಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. 23 ಸದಸ್ಯರನ್ನು ಹೊಂದಿರುವ ಕಾರ್ಕಳ ಪುರಸಭೆಯಲ್ಲಿ 11 ಮಂದಿ ಬಿಜೆಪಿ, 11 ಮಂದಿ ಕಾಂಗ್ರೆಸ್‌ ಹಾಗೂ ಒರ್ವರು ಪಕ್ಷೇತರ ಸದಸ್ಯರಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಸಮ ಬಲದ ಸ್ಥಾನ ಹೊಂದಿರುವ ಕಾರಣ ಪಕ್ಷೇತರ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ ಕಿಂಗ್‌ ಮೇಕರ್‌ ಆಗಬೇಕಿತ್ತು. ಆದರೆ, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಶಾಸಕ, ಸಂಸದರ ಮತ ಗಣನೆಗೆ ಇರುವುದರಿಂದ ಅವರ ಮತವೇ ನಿರ್ಣಾಯಕವಾಗಲಿದೆ.









































































































error: Content is protected !!
Scroll to Top