ಮುರತ್ತಂಗಡಿಯಲ್ಲಿ ಪ್ರಚೋದನಕಾರಿ ಫ್ಲೆಕ್ಸ್‌ ಅಳವಡಿಕೆ – ಇಬ್ಬರ ಬಂಧನ

ಕಾರ್ಕಳ : ಸಾಣೂರು ಮುರತ್ತಂಗಡಿಯಲ್ಲಿ ಅವಹೇಳನಕಾರಿಯಾಗಿ ಪೋಸ್ಟರ್ ಹಾಕಿದ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮಾಡಿಕೊಟ್ಟಿರುವ ಗ್ರಾಫಿಕ್ಸ್ ಮಾಲೀಕರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, A1 ಆರೋಪಿ ಸತೀಶ್ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. A2 ಆರೋಪಿಗೆ ಷರತ್ತು ಬದ್ಧ ಜಾಮೀನು ಲಭಿಸಿದೆ. ಸತೀಶ್‌ ದೇವಾಡಿಗ ಮಾನಸಿಕ ಅಸ್ವಸ್ಥನಾಗಿದ್ದಾನೆ ಎನ್ನಲಾಗುತ್ತಿದೆ.

ಬ್ಯಾನರ್‌ ಅಳವಡಿಕೆ ಕುರಿತಂತೆ ಸ್ಥಳೀಯರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಂತಿ ಕದಡುವ ಉದ್ದೇಶದಿಂದ ಕಿಡಿಗೇಡಿಗಳು ಎಸಗಿರುವ ಕೃತ್ಯ ಇದಾಗಿದ್ದು ಬ್ಯಾನರ್‌ ಅಳವಡಿಸಿದಾತನ ಬಂಧನವಾಗಬೇಕೆಂದು ಆಗ್ರಹಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



















































































error: Content is protected !!
Scroll to Top