ಮಾಜಿ ಸಚಿವ ಸುರೇಶ್‌ಕುಮಾರ್‌ ಅಸ್ವಸ್ಥ : ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ, ಹಾಲಿ ಶಾಸಕ ಎಸ್‌. ಸುರೇಶ್‌ ಕುಮಾರ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುರೇಶ್‌ ಕುಮಾರ್‌ ಅವಋ ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್‌ಕುಮಾರ್‌ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿ ಆಗಿದ್ದರು. ಕಳೆದ 3-4 ದಿನಗಳ ಹಿಂದೆ ತೀವ್ರ ಜ್ವರಕ್ಕೆ ತುತ್ತಾಗಿದ್ದರು.
ಮಂಗಳವಾರ ರಾತ್ರಿ ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

















































error: Content is protected !!
Scroll to Top