ಕಾರ್ಕಳ : ಬರೀಹ ಇಂಟರ್ ನ್ಯಾಶನಲ್ ಸ್ಕೂಲ್ ಪುಲ್ಕೇರಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಕೊಳಕೆ ಇರ್ವತ್ತೂರು ಪ್ರಾಥಮಿಕ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ತ್ರೋಬಾಲ್ ಪಂದ್ಯಾಟ – ಕೊಳೆಕೆ ಇರ್ವತ್ತೂರು ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ


































