ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ -ಸನ್ಮಾನ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಸೆ. 5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಭಾರತ್ ಸೇವಾ ದಳದ ಸೆಂಟ್ರಲ್‌ ಕಮಿಟಿಯ ಸದಸ್ಯ ರೊಟೇರಿಯನ್‌ ತಿಮ್ಮಪ್ಪ ಶೆಟ್ಟಿ ಆರೂರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಭಾರತ ಅತ್ಯಂತ ಶ್ರೇಷ್ಟ ಸಂಸ್ಕಾರವುಳ್ಳ ಪುಣ್ಯ ಭೂಮಿ. ಜನನಿಯೇ ಮೊದಲ ಗುರು ಅಂತೆಯೇ ನಮ್ಮ ಬದುಕಿಗೆ ಮಾರ್ಗದರ್ಶನ ಮಾಡಿದವರೆಲ್ಲರೂ ಗುರುಗಳೇ. ಕುಂಬಾರ ಮಣ್ಣಿನಿಂದ ಮಡಕೆ ಮಾಡುವಂತೆ ಶಿಕ್ಷಕರು ಮಕ್ಕಳನ್ನು ತಿದ್ದಿ ತೀಡಿ ಜೀವನರೂಪಿಸುತ್ತಾರೆ ಎಂದುಅವರು ಇತಿಹಾಸ ತಿಳಿಯದವ, ವರ್ತಮಾನ ಅನುಭವಿಸದವ ಭವಿಷ್ಯ ಬರೆಯಲಾರ ಎಂದರು.

ಗುರುವಂದನೆ
ಕಾರ್ಕಳ ಪುಲ್ಕೇರಿ ಶ್ರೀ ರಾಮಪ್ಪ ಅನುದಾನಿತ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ತಂಗಿ ಎಸ್. ಸುವರ್ಣ, ಕಾರ್ಕಳ ಕೆ.ಎಂ.ಇ.ಎಸ್. ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಫರೀದಾ ಖಾನ್ ಮತ್ತು ಹೆಕ್ಕಡ್ಕದ ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಉಷಾ ಎಸ್. ರಾವ್‌ ಅವರನ್ನು ಸನ್ಮಾನಿಸಿ ಗುರುವಂದನೆ ಸಲ್ಲಿಸಲಾಯಿತು.
ಸಂಸ್ಥೆಯ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಉಪ ಪ್ರಾಂಶುಪಾಲೆ ವಾಣಿ ಕೆ., ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಡೀನ್‌ ಸ್ಟುಡೆಂಟ್ಸ್ ಅಫೇರ್ ಶಕುಂತಲಾ ಸುವರ್ಣ, ಅಕಾಡೆಮಿಕ್‌ ಅಡ್ವೈಸರ್‌ ಶಾರದಾ ಅಂಬರೀಶ್, ಡೀನ್‌ ಅಕಾಡೆಮಿಕ್ಸ್‌ ಡಾ. ಮಿಥುನ್‌ ಯು., ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಉಷಾ ರಾವ್‌ ಯು. ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಆಂಗ್ಲಭಾಷಾ ಶಿಕ್ಷಕಿ ದಿವ್ಯಾ ಕೆ. ಕಾರ್ಯಕ್ರಮ ನಿರ್ವಹಿಸಿದರು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಕುಂದಾರು ಮಾತನಾಡಿ, ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಕೆಲಸ ಶಿಕ್ಷಕರದ್ದಾಗಿದೆ ಎಂದು ಹೇಳಿದರು.

ಸನ್ಮಾನ
ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಉಡುಪಿ ನಿಟ್ಟೂರು ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಭಾಸ್ಕರ್ ಡಿ. ಸುವರ್ಣ, ಬೀಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ದಯಾವತಿ, ಪುತ್ತೂರು ಎಲ್.ವಿ.ಪಿ. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಐರಿನ್ ಮೆನೆಜಸ್, ಕುದಿ ಶ್ರೀ ವಿಷ್ಣುಮೂರ್ತಿ ಪ್ರೌಢ ಶಾಲೆ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಪ್ರಭು ನಿವೃತ್ತ ಹಾಗೂ ಪರ್ಕಳ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ವಾಸು ಪ್ರಭು ಇವರನ್ನು ಗೌರವಿಸಲಾಯಿತು. ಇದೇ ಸಂದರ್ಭ ಚೆಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಿಖಿಲ್ ವಿಕ್ರಮ್ ಕೆ. ಎಸ್. ಮತ್ತು ಮಿಥಾಲಿ ಶೆಟ್ಟಿ ಹಾಗೂ ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ವತ್ ವಿ. ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಉಪ ಪ್ರಾಂಶುಪಾಲ ಪ್ರಕಾಶ್ ಜೋಗಿ ವಂದಿಸಿದರು.





























































































































error: Content is protected !!
Scroll to Top