ಎತ್ತಿನಹೊಳೆ ಯೋಜನೆ ಕೊನೆಗೂ ಲೋಕಾರ್ಪಣೆ

ಹಾಸನ : ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್‌ಹೌಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್‌ಹೌಸ್​​ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸಲಿರುವ ಮಹತ್ವಾಕಾಂಕ್ಷೆಯ ಯೋಜನೆ ಇದು ಎಂದು ಬಣ್ಣಿಸಲಾಗಿದೆ.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಮತ್ತು ಐದು ತಾಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಉದ್ಘಾಟನೆಗೆ ಸಾಕ್ಷಿಯಾದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. ಬೈಕೆರೆ ದೊಡ್ಡನಗರದ ಪಂಪ್‌ಹೌಸ್‌ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸಪ್ತಗಂಗಾ ಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.









error: Content is protected !!
Scroll to Top