ಪೊಲೀಸ್‌ ಠಾಣೆಯೊಳಗೆ ನುಗ್ಗಿ ಹಿಂದೂ ಬಾಲಕನ ಮೇಲೆ ಬರ್ಬರ ಹಲ್ಲೆ

ಢಾಕ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೊಲೀಸ್​ ಠಾಣೆಯೊಳಗೆ ನುಗ್ಗಿ ಮುಸ್ಲಿಂ ಗುಂಪು ಹಿಂದೂ ಹುಡುಗನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಬಾಂಗ್ಲಾದೇಶದ 15 ವರ್ಷದ ಹಿಂದೂ ಬಾಲಕ ಉತ್ಸವ್ ಮಂಡಲ್ ಸಾಮಾಜಿಕ ಮಾಧ್ಯಮದಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಗುಂಪು ಪೊಲೀಸ್​ ಠಾಣೆಯೊಳಗೆ ನುಗ್ಗಿ ಅಮಾನುಷವಾಗಿ ಥಳಿಸಿದೆ.

ಖುಲ್ನಾದ ಸೋನದಂಗ ವಸತಿ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಉತ್ಸವ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.
ಪ್ರವಾದಿಯವರ ಕುರಿತು ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಸ್ಥಳೀಯ ಮದರಸ ವಿದ್ಯಾರ್ಥಿಗಳ ಗುಂಪು ಉತ್ಸವ್​ನನ್ನು ರಾತ್ರಿ 11.45ರ ಸುಮಾರಿಗೆ ಪೊಲೀಸ್ ಠಾಣೆಗೆ ಕರೆತಂದು ಥಳಿಸಿದೆ.

ವಿದ್ಯಾರ್ಥಿಗಳು ಮತ್ತು ಇಮಾಮ್ ಅಸೋಸಿಯೇಶನ್‌ನ ಸದಸ್ಯರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನವಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಉತ್ಸವ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸೇನಾ ಸಿಬ್ಬಂದಿ ಅಂತಿಮವಾಗಿ ಕರೆದೊಯ್ದರು. ಆತನ ವಿರುದ್ಧ ಧರ್ಮನಿಂದನೆ ಪ್ರಕರಣ ದಾಖಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.





























































































error: Content is protected !!
Scroll to Top