ಕಬಡ್ಡಿ : ಎಸ್‌ವಿಟಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಮುಂಡ್ಕೂರು ಆಶ್ರಯದಲ್ಲಿ ನಡೆದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಎಸ್‌ವಿಟಿ ವನಿತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಂಡದ ಸಾಕ್ಷಿ ಶೆಟ್ಟಿ ಅತ್ಯುತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಪ್ರಭಾವತಿ ಹೆಗ್ಡೆ ಮತ್ತು ಮುಖ್ಯ ತರಬೇತುದಾರ ಶಶಿಧರ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ತಂಡವನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

































































































error: Content is protected !!
Scroll to Top