ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ : ಜನತೆಗೆ ಪ್ರಧಾನಿ ಮೋದಿ ಶುಭಾಶಯ

ದೆಹಲಿ : ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪ ಮೋರ್ಯ ಎಂದು ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.

ಕಾರ್ಕದೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ಗ್ರಾಮ ಗ್ರಾಮಗಳಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಕೆಲವೆಡೆ ಒಂದು ದಿನ, ಇನ್ನು ಕೆಲವೆಡೆ 3, 5, 7 ದಿನ ಹೀಗೆ ಹಬ್ಬ ನಡೆಯಲಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 481 ಕಡೆಗಳಲ್ಲಿ ಗಣೇಶೋತ್ಸವ ಪೆಂಡಾಲ್‌ಗೆ ಅವಕಾಶ ವನ್ನು ಪೊಲೀಸ್‌ ಇಲಾಖೆಯಿಂದ ಒದಗಿಸ ಲಾಗಿದೆ. ಇದರಲ್ಲಿ 406 ಸಾಮಾನ್ಯ, 73 ಸೂಕ್ಷ್ಮ, 2 ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶದಲ್ಲಿ ಮೆರವಣಿಗೆ ವೇಳೆ ಪೊಲೀಸರ ವಿಶೇಷ ಭದ್ರತೆ ಇರಲಿದೆ.











































































error: Content is protected !!
Scroll to Top