ಕುಕ್ಕುಂದೂರು : ಕರ್ತವ್ಯಲೋಪ – ಅಂಗನವಾಡಿ ಕಾರ್ಯಕರ್ತೆ ಅಮಾನತು

ಕಾರ್ಕಳ : ಅಂಗನವಾಡಿ ಕಟ್ಟಡ ಉದ್ಘಾಟನೆಯ ವಿಚಾರವಾಗಿ ಪ್ರೊಟೊಕಾಲ್ ಪಾಲಿಸದೆ ಕರ್ತವ್ಯಲೋಪ ಎಸಗಿದ್ದಾರೆ ಎಂದು ಕುಕ್ಕುಂದೂರು ಗ್ರಾಮದ ಜಯಂತಿನಗರ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಅವರನ್ನು ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ.

ಜಯಂತಿನಗರ ಅಂಗನವಾಡಿ ಕೇಂದ್ರದಲ್ಲಿ ಹೆಚ್ಚುವರಿ ಕೊಠಡಿಯನ್ನು ಕುಕ್ಕುಂದೂರು ಗ್ರಾಮ ಪಂಚಾಯತ್ ಅನುದಾನದಿಂದ ನಿರ್ಮಿಸಲಾಗಿದ್ದು, ಆ. 28ರಂದು ಗಣಹೋಮದೊಂದಿಗೆ ಇದರ ಉದ್ಘಾಟನೆಯಾಗಿತ್ತು. ಆದರೆ, ಉದ್ಘಾಟನೆಯ ಮಾಹಿತಿಯನ್ನು ಕ್ಷೇತ್ರದ ಶಾಸಕರ ಗಮನಕ್ಕೆ ತರಲಿಲ್ಲ. ಈ ಮೂಲಕ ಪ್ರೋಟೋಕಾಲ್‌ ಪಾಲಿಸಲಿಲ್ಲ ಎಂದು ಆರೋಪಿಸಿ ಸ್ಥಳೀಯರು ಸಂಬಂಧಪಟ್ಟ ಇಲಾಖೆಗೆ ಅಂಗನವಾಡಿ ಕಾರ್ಯಕರ್ತೆ ವಿರುದ್ಧ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಇದು ಶಿಷ್ಟಾಚಾರ ಉಲ್ಲಂಘನೆಯಾಗಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕರ್ತವ್ಯಲೋಪ ಎಸಗಿದ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.







































































error: Content is protected !!
Scroll to Top