ಹೆಬ್ರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಹೆಬ್ರಿ : ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಪ್ರೌಢಶಾಲಾ ವಿಭಾಗ ಇಲ್ಲಿ ಸೆ.6ರಂದು ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು. ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರನಾಥ್ ಬಂಗೇರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ, ಚೈತನ್ಯ ಯುವ ವೃಂದದ ಶಂಕರ್ ಸೇರಿಗಾರ್, ಕಾರ್ಕಳ ದೈಹಿಕ ಶಿಕ್ಷಣ ಪರಿವೀಕ್ಷಣ ಅಧಿಕಾರಿ ರವಿಚಂದ್ರ ಕಾರಂತ್, ಪ್ರಾಂಶುಪಾಲ ಉಮೇಶ್, ಉಪ ಪ್ರಾಂಶುಪಾಲದಿವಾಕರ್ ಮರಕಾಲ ಎಸ್., ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಶೆಟ್ಟಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಸದಸ್ಯ ವಿಷ್ಣುಮೂರ್ತಿ ಉಪಸ್ಥಿತರಿದ್ದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಚ್. ಪಿ. ಮಂಜೇಗೌಡ ಸ್ವಾಗತಿಸಿ, ದಿವಾಕರ್ ಮರಕಾಲ ಎಸ್. ವಂದಿಸಿದರು. ಗಣಿತ ಅಧ್ಯಾಪಕ ವೆಂಕಟರಮಣ ಕಲ್ಕೂರ್ ಕಾರ್ಯಕ್ರಮ ನಿರೂಪಿಸಿದರು.

ವಿಜೇತರು
ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕೆಪಿಎಸ್ ಮುನಿಯಾಲು, ದ್ವಿತೀಯ ಸ್ಥಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗುರುಕೃಪಾ ಬಲ್ಯೊಟ್ಟು, ದ್ವಿತೀಯ ಸ್ಥಾನವನ್ನು ಸುಂದರ ಪುರಾಣಿಕ್ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಪಡೆಯಿತು.

















































error: Content is protected !!
Scroll to Top