ಅಜೆಕಾರು – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 6ರಂದು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ಅಂತೋನಿ ಪಿರೇರಾ(63) ನೇಣಿಗೆ ಶರಣಾದವರು. ಇವರು ಸುಮಾರು 5 ವರ್ಷಗಳಿಂದ ಹೃದಯ ಸಂಬಂಧಿ ಹಾಗೂ ಮೊಣಕಾಲು ಗಂಟು ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಅಪರೇಷನ್ ಕೂಡಾ ನಡೆದಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೇ ವಿಚಾರದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಜೀವನದಲ್ಲಿ ಜಿಗುಪ್ಸೆಗೊಂಡು ಸೆ. 6ರ ಸಂಜೆ 3.30ರಿಂದ 4.30 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಸೀಟೌಟ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.









































































































error: Content is protected !!
Scroll to Top