ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಾಪಾಸ್‌ – ಪ್ರತಿಭಟನೆ ನಡೆಸಿದವರ ಮೇಲೆ FIR

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕಾರ್ಯ – ಸುನಿಲ್ ಕುಮಾರ್‌ ಖಂಡನೆ

ಕಾರ್ಕಳ : ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿರುವುದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಮಂದಿಯ ವಿರುದ್ಧ FIR ದಾಖಲಿಸಲು ಸರಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಕತ್ತು ಹಿಸುಕುವ ಕೃತ್ಯ
ಪ್ರತಿಭಟನಾ ನಿರತರ ಮೇಲೆ FIR ದಾಖಲಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೃತ್ಯ. ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದುವರೆಗೆ ಆಡಿದ ಮಾತುಗಳೆಲ್ಲವೂ ಕೇವಲ ತೋರಿಕೆ. ಈ ಎಲ್ಲ ಮಾತುಗಳು ಪ್ರತಿಪಕ್ಷದಲ್ಲಿ ಇದ್ದಾಗ ಮಾತ್ರ ಅವರಿಗೆ ಸುಲಭವಾಗಿ ಲಭಿಸುವ ಭಾಷಣದ ಸರಕು ಎಂಬುದು ಈಗ ದೃಢಪಟ್ಟಿದೆ. ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಒಂದು ಪ್ರತಿಭಟನೆಯನ್ನೂ ಸಹಿಸಲಾಗದಂಥ ನಿರಂಕುಶ ಮನಃಸ್ಥಿತಿ ಆವರಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಉದಾಹರಣೆ ಎಂದು ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತೀಯವಾದಿಗಳ ಒತ್ತಡಕ್ಕೆ ಮಣಿದ ಸರಕಾರ
ಬಿ. ಜಿ. ರಾಮಕೃಷ್ಣ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ಸರ್ಕಾರ ವಾಪಾಸ್ ತೆಗೆದುಕೊಂಡಿತ್ತು. ಇದರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಲ್ಲಿ ಭಾಗಿಯಾದ ಹನ್ನೊಂದು ಜನರ ಮೇಲೆ FIR ದಾಖಲಿಸಲು ಸರಕಾರ ಸೂಚಿಸಿದೆ. ನಿಮ್ಮ ಸರಕಾರ ಪ್ರತಿಭಟನೆ ನಡೆಸುವುದನ್ನೂ ಸಹಿಸದಷ್ಟು ಪ್ರಜಾಪ್ರಭುತ್ವ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ ಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ದ್ವೇಷ ರಾಜಕಾರಣ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ವಿಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ದ್ವೇಷ ರಾಜಕಾರಣ ನಡೆಸುತ್ತಿದೆ. ಅದು ಈಗ ಮತ್ತೊಂದು ಮಜಲು ತಲುಪಿದೆ. ಈಗ ಹೋರಾಟಗಾರರನ್ನೂ ದಮನಿಸುವುದಕ್ಕೆ ಈ ಸರಕಾರ ಮುಂದಾಗಿದೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತವಲ್ಲ. ದೌರ್ಜನ್ಯಕ್ಕೆ ಜನ ಬೆದರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಸಾಕ್ಷಿ ನಾಶ ಸುಲಭವಲ್ಲ ಎಂಬುದು ನೆನಪಿರಲಿ ಎಂದು ಸುನಿಲ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











































































error: Content is protected !!
Scroll to Top