ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ – ಆಸ್ಪತ್ರೆ ದಾಖಲು

ಕಾರ್ಕಳ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿಯಾಗಿ ಆಸ್ಪತ್ರೆ ದಾಖಲಾದ ಘಟನೆ ಸೆ. 9ರಂದು ಮುಡಾರು ಗ್ರಾಮದ ಬಜಗೋಳಿಯಲ್ಲಿ ಸಂಭವಿಸಿದೆ.
ಬಾಗಲಕೋಟೆ ನಿವಾಸಿ ಲಾಲಾಸಾಬ್ ಮೊಖಾಶಿ (48 ವರ್ಷ) ಎಂಬವರು ಸೋಮವಾರದಂದು ರಾತ್ರಿ 8-30 ಗಂಟೆಗೆ ದಿಡಿಂಬಿರಿ ಕ್ರಾಸ್ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದು ಈ ಸಂದರ್ಭ ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ KA 19 AD 2759 ನಂಬ್ರದ ಬಸ್ಸನ್ನು ಅದರ ಚಾಲಕ ರವೀಂದ್ರ ಎಂಬವರು ಚಲಾಯಿಸಿಕೊಂಡು ಬಂದು ಲಾಲಾಸಾಬ್ ಮೊಖಾಶಿ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಗಾಯಾಳು ಲಾಲಾಸಾಬ್ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುತ್ತಾರೆ. ಈ ಬಗ್ಗೆ ಶಿರ್ಲಾಲು ಗ್ರಾಮದ ಉಮೇಶ ಎಂಬವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top