ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆ – ಮಾಹಿತಿ ಕಾರ್ಯಗಾರ

ಕಾರ್ಕಳ : ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು. ತನ್ಮೂಲಕ ಮಾನಸಿಕ ಸ್ಥೈರ್ಯ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರೀನ್ ಜೆನ್ನಿಫರ್ ಅಭಿಪ್ರಾಯಪಟ್ಟರು.
ಅವರು ಸೆ. 10ರಂದು ಕ್ರಿಯೇಟಿವ್‌ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ನಡೆದ ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ, ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ ಎಂದರು.
ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್. ಮಾತನಾಡಿ, ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್ ಮಾತನಾಡಿ, ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆಯ ಆಯ್ಕೆ ಪರಿಹಾರವಲ್ಲ. ಆತ್ಮಹತ್ಯೆ ಎಂಬ ಸಾವು ಸಾಧನೆಯಲ್ಲ. ಬದುಕಿ ಬದುಕನ್ನು ಗೆದ್ದು ಸಾಧಿಸಿ ತೋರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಸಮುದಾಯದ ಪಾತ್ರ ಎಂಬ ವಿಷಯದ ಕುರಿತು ಕರಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭ ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಮಾ, ಆಶಾ ಕಾರ್ಯಕರ್ತೆ ಸುಜಾತ, ಬೋಧಕ ಮತ್ತು ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು





























































































































error: Content is protected !!
Scroll to Top