ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ಎಂಬಾತನ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ಥಾನಿ ಐಎಸ್​ ಏಜೆಂಟ್ ರೀತಿ ಬಿಂಬಿಸಿ ಪೋಸ್ಟ್ ಹಾಕಿದ್ದ. ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.
‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ‌ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ’ಎಂದು ಸಲಾಲುದ್ದೀನ್ ಸುಹೇಬ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ.
‘ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ ಸೇರಿಕೊಂಡು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದು ಪೋಸ್ಟ್ ಮಾಡಿದ್ದ. ಇದನ್ನು ‘ದಿ ಜೈಪುರ್ ಡೈಲಾಗ್ಸ್’ ಎಂಬ ವೆಬ್​ಸೈಟ್ ಮೂಲಕ ರಿಟ್ವೀಟ್ ಮಾಡಿಸಲಾಗಿತ್ತು. ಅದಿತಿ ಘೋಷ್ ಎಂಬುವವರು ರೀಪೋಸ್ಟ್ ಮಾಡಿ ಜನರಿಗೆ ತಲುಪಿಸಿ, ಕೋಮು ಸೌಹಾರ್ದ್ಯತೆಗೆ ಧಕ್ಕೆ ತರುತ್ತಿದ್ದಾರೆ ಎಂದು ದೂರಿದ್ದರು. ಈ ಸಂಬಂಧ ವಕೀಲ ಶ್ರೀನಿವಾಸ್ ಎಂಬುವವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆ.23ರಂದು ಬಾಂಗ್ಲಾದೇಶ ಮೂಲದ ಸಲಾಲುದ್ದೀನ್ ಸುಹೇಬ್ ತಮ್ಮ ‘X’ ಅಕೌಂಟ್ ಹೆಸರಿನ @salaha_shoaib, ಟ್ವಿಟರ್ ಖಾತೆಯ ಲಿಂಕ್ ಮುಖಾಂತರ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಗ್ಗೆ, ಟ್ವೀಟ್ ಮಾಡಿದ್ದಾನೆ. ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಪಕ್ಷವೊಂದರ ನಾಯಕರ ಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮತ್ತು ಕೋಮುಸೌಹಾರ್ದಕ್ಕೆ ಧಕ್ಕೆಯುಂಟುಮಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಕದಡುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಗೌರವಕ್ಕೆ ಧಕ್ಕೆ ತರುವಂತೆ ಮಾಡಿದ್ದಲ್ಲದೆ, ಅಪಪ್ರಚಾರ ಮಾಡಲು ಕಾರಣಕರ್ತರಾಗಿರುತ್ತಾರೆ. ಇವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಶ್ರೀನಿವಾಸ್ ಮನವಿ ಮಾಡಿದ್ದಾರೆ.









error: Content is protected !!
Scroll to Top