ಹೆಬ್ರಿ : ಕಾರೊಂದು ಚಾಲಕ ನಿಯಂತ್ರಣ ತಪ್ಪಿ ಮಣ್ಣಿನ ಗೋಡೆಗೆ ಡಿಕ್ಕಿ ಹೊಡೆದು, ಪ್ರಯಾಣಿಕರು ಅದೃಷ್ಟವಶಾತ್ ಪಾರಾದ ಘಟನೆ ಸೆ. 21ರ ಮುಂಜಾನೆ 4 ಗಂಟೆಗೆ ಮುನಿಯಾಲಿನಲ್ಲಿ ಸಂಭವಿಸಿದೆ.
ಗದಗದಿಂದ ಹೆಬ್ರಿ – ಕಾರ್ಕಳ ಮಾರ್ಗವಾಗಿ ಪುತ್ತೂರು ಸಾಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಮುಂಜಾನೆ 4 ಗಂಟೆಯ ಸುಮಾರಿಗೆ ಮುನಿಯಾಲಿನಲ್ಲಿ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿದ್ರೆಯ ಮಂಪರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಮಣ್ಣಿನ ಗೋಡೆಗೆ ಡಿಕ್ಕಿ ಹೊಡೆದ ಕಾರು – ಪ್ರಯಾಣಿಕರು ಪಾರು






























































