ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಮ್.ಜಿ.ಎಂ. ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕಿಯೋರಾ ಪಾಯಸ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪಂದ್ಯಾಟದಲ್ಲಿ ಸತತ ಮೂರನೇ ಬಾರಿಗೆ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾದ ಹೆಗ್ಗಳಿಕೆ ಕಿಯೋರಾ ಪಾಯಸ್‌ನವರದ್ದಾಗಿದೆ.
ಕ್ರೈಸ್ಟ್‌ಕಿಂಗ್ : ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕಿಯೋರಾ ಪಾಯಸ್ ಸತತ ಮೂರನೇ ಬಾರಿ ರಾಜ್ಯ ಮಟ್ಟಕ್ಕೆ






























































