ಕಾರ್ಕಳ : ಕಲ್ಲಗುಪ್ಪೆ ಸ. ಹಿ. ಪ್ರಾ. ಶಾಲೆಯಲ್ಲಿ ಸೆ. 25ರಂದು ಪೋಷಣ್ ಅಭಿಯಾನ, ಆರೋಗ್ಯ ಮಾಹಿತಿ ಹಾಗೂ ಮೊಟ್ಟೆ ವಿತರಣಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಜಯ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ದೀಪ್ತಿ ದಿನೇಶ್, ಮಿಯ್ಯಾರು ಸಮುದಾಯ ಆರೋಗ್ಯ ಅಧಿಕಾರಿ ಮೆಹತ್ತಾಬ್, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮನೋಹರ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಆರೋಗ್ಯ ಅಧಿಕಾರಿಗಳೂ ಪೋಷಣ್ ಅಭಿಯಾನ, ಕಾಲರಾ ರೋಗ ಹಾಗೂ ಕೈ ತೊಳೆಯುವ ವಿಧಾನದ ಬಗ್ಗೆ ಮಾಹಿತಿ ನೀಡಿದರು. ನಂತರ ಅಜಿಂ ಪ್ರೇಮ್ ಜಿ ಪೌಂಡೇಶನ್ ಇವರ ವತಿಯಿಂದ ಶಾಲೆಯಲ್ಲಿ ವಾರದ 6 ದಿನ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಲ್ಲಗುಪ್ಪೆ ಸ. ಹಿ. ಪ್ರಾ. ಶಾಲೆಯಲ್ಲಿ ಪೋಷಣ್ ಅಭಿಯಾನ
























