ತಾಲೂಕಿನೆಲ್ಲೆಡೆ ಶಾಲೆಗಳಲ್ಲಿ ಪೋಷಣ್‌ ಅಭಿಯಾನ – ಪೌಷ್ಠಿಕ ಆಹಾರ ವಿತರಣೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಿ.ಎಂ. ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳು ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ತಾಲೂಕಿನೆಲ್ಲೆಡೆ ಶಾಲೆಗಳಲ್ಲಿ ಸೆ. 25ರಂದು ಚಾಲನೆ ನೀಡಲಾಯಿತು

ಕಾಬೆಟ್ಟು ಶಾಲೆ
ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಣ್‌ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಬಿ.ಎ., ಅಕ್ಷರ ದಾಸೋಹ ನಿರ್ದೇಶಕ ಭಾಸ್ಕರ್ ಟಿ., ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂದೀಪ್ ಕುಡ್ವ ಹಾಗೂ ಉದ್ಯಮಿ ನವೀನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಕಳ ಮೈನ್ ಶಾಲೆ

ಸ. ಹಿ. ಪ್ರಾ. ಶಾಲೆ ಕಾರ್ಕಳ ಮೈನ್ ಇಲ್ಲಿಯೂ ಪೋಷಣ್‌ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭ ಸಾಣೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ , ಮುಖ್ಯ ಶಿಕ್ಷಕಿ ಶಶಿಕಲಾ, ಸಹ ಶಿಕ್ಷಕರಾದ ಶಿವಾನಂದ, ಪ್ರತಿಮಾ ಎಸ್., ಮಧುಶ್ರೀ, ಅಶ್ವಿನಿ, ಪೂಜ, ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.

ಕೂಡಬೆಟ್ಟು ಮಾಳ ಶಾಲೆ

ಪಿ.ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಬೆಟ್ಟು ಮಾಳ ಇಲ್ಲಿನ ಎಸ್‌.ಡಿ.ಎಂ.ಸಿ. ಉಪಾಧ್ಯಕ್ಷೆ ವಿಜಯಾ ಬಾಲಕೃಷ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಶಿಕ್ಷಕಿ ಪ್ರಭಾವತಿ ಹಾಗೂ ಶಿಕ್ಷಕ ರಾಧಾಕೃಷ್ಣ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

ಕಲ್ಲಗುಪ್ಪೆ ಶಾಲೆ

ಕಲ್ಲಗುಪ್ಪೆ ಸ. ಹಿ. ಪ್ರಾ. ಶಾಲೆಯಲ್ಲಿ ಪೋಷಣ್‌ ಅಭಿಯಾನ, ಆರೋಗ್ಯ ಮಾಹಿತಿ ಹಾಗೂ ಮೊಟ್ಟೆ ವಿತರಣಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಜಯ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ದೀಪ್ತಿ ದಿನೇಶ್, ಮಿಯ್ಯಾರು ಸಮುದಾಯ ಆರೋಗ್ಯ ಅಧಿಕಾರಿ ಮೆಹತ್ತಾಬ್, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮನೋಹರ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಆರೋಗ್ಯ ಅಧಿಕಾರಿಗಳೂ ಪೋಷಣ್‌ ಅಭಿಯಾನ, ಕಾಲರಾ ರೋಗ ಹಾಗೂ ಕೈ ತೊಳೆಯುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.

















































error: Content is protected !!
Scroll to Top