ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು – ನ್ಯಾ. ಸಂತೋಷ್‌ ಹೆಗ್ಡೆ

ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು ಎಂದು ಸಲಹೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅಪಘಾತ ಮಾಡಿದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ಹಾಗೆಯೇ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕು ಎಂದ ಅವರು ರಾಜೀನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಬಿಟ್ಟಿದ್ದು. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.

ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಎಂದು ಹೇಳಿದೆ. ಹಾಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆನಿಸುತ್ತಿದೆ. ರಾಜೀನಾಮೆ ಕೊಡುವುದು ಸಿದ್ದರಾಮಯ್ಯಗೆ ಬಿಟ್ಟದ್ದು. ಯಾವ ತನಿಖಾ ಸಮಿತಿ ಉತ್ತಮವೆಂದು ಹೇಳಲ್ಲ, ಸರಕಾರಕ್ಕೆ ಬಿಟ್ಟ ವಿಚಾರ. ಯಾವುದೇ ತನಿಖಾ ಸಮಿತಿ ವಿಚಾರಣೆ ಮಾಡಬಹುದು. ಅವರು ಆರೋಪಿಯಲ್ಲವೆಂದು ತೀರ್ಪು ಬಂದರೆ ಮತ್ತೆ ಹುದ್ದೆ ಅಲಂಕರಿಸಲಿ ಎಂದಿದ್ದಾರೆ.

















































error: Content is protected !!
Scroll to Top