ಸಾಕ್ಷಿ ಶೆಟ್ಟಿ ಚಕ್ರ ಎಸೆತದಲ್ಲಿ ತೃತೀಯ
ಕಾರ್ಕಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉಡುಪಿ ತಾಲೂಕು ಪಂಚಾಯತ್‌ನ ಸಂಯುಕ್ತ ಆಶ್ರಯದಲ್ಲಿ ನಡೆದ 2024ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಹರೀಶ್ ಹಾಗೂ ಶೋಭಾ ದಂಪತಿಯ ಪುತ್ರಿ.
ಚಕ್ರ ಎಸೆತ ಸ್ಪರ್ಧೆಯಲ್ಲಿ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಬೈಲೂರಿನ ಹರೀಶ್ ಶೆಟ್ಟಿ ಹಾಗೂ ಜಯಲಕ್ಷ್ಮೀ ಶೆಟ್ಟಿ ದಂಪತಿ ಪುತ್ರಿ.
ವಿಜೇತರನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.































