ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪ.ಪೂ. ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನ ಪಡೆದಿದೆ. ಜ್ಞಾನಸುಧಾ ದ್ವಿತೀಯ ವಿಜ್ಞಾನ ವಿಭಾಗದ ಕು. ಗುಣಶ್ರೀ ಆರ್., ಮನಸ್ವಿ ಎಚ್.ಟಿ., ಪ್ರಥಮ ವಿಜ್ಞಾನ ವಿಭಾಗದ ಕು. ಪೂರ್ಣಶ್ರೀ ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ಕು. ದಿಗಂತ್ ಎಚ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಅಭಿನಂದಿಸಿದ್ದಾರೆ.
ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ
























