ಕಾರ್ಕಳ : ಯುವಕನೋರ್ವ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 28ರಂದು ಸಾಣೂರಿನಲ್ಲಿ ಸಂಭವಿಸಿದೆ. ಸುಮನ್ ಶೆಟ್ಟಿ (22) ಆತ್ಮಹತ್ಯೆಗೆ ಶರಣಾದವರು. ಬೆಳಗ್ಗೆ ಸಾಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಸುಮನ್ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಈ ವೇಳೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿರುತ್ತದೆ. ಕಡಬಬೆಟ್ಟು ಜನನಿಬೀಡ ಪ್ರದೇಶದಲ್ಲಿರುವ ಬಾವಿಗೆ ಸುಮನ್ ಹಾರಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ಶರೀರವನ್ನು ಮೇಲಕ್ಕೆತ್ತಿದ್ದಾರೆ. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.
ಜನ್ಮದಿನದಂದೇ ಜೀವನ ಯಾತ್ರೆ ಕೊನೆಗೊಳಿಸಿದ ಯುವಕ































