ಪ್ರತ್ಯೇಕ ಪ್ರಕರಣ – ಅನಾರೋಗ್ಯದಿಂದ ಬಳಲುತ್ತಿದ್ದವರು ನೇಣಿಗೆ ಶರಣು

ಕಾರ್ಕಳ : ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 30ರಂದು ಕಾರ್ಕಳದಲ್ಲಿ ಸಂಭವಿಸಿದೆ. ಸರೋಜಿನಿ (73) ನೇಣಿಗೆ ಶರಣಾದವರು. ಇವರು 8 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಖಾಯಿಲೆ ಗುಣಮುಖವಾಗದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಕಸಬಾ ಗ್ರಾಮದ ಪತ್ತೋಂಜಿಕಟ್ಟೆಯಲ್ಲಿರುವ ತಮ್ಮ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮುಂಡ್ಕೂರು – ವ್ಯಕ್ತಿ ನೇಣಿಗೆ ಶರಣು
ಮುಂಡ್ಕೂರು ಗ್ರಾಮದ ಉಮೇಶ್‌ (55) ಎಂಬವರಿಗೆ ಕಣ್ಣಿನ ದೃಷ್ಠಿಯ ಸಮಸ್ಯೆಯಿದ್ದು, ಚಿಕಿತ್ಸೆ ಪಡೆಯುತ್ತಿರಲಿಲ್ಲ. ಅಲ್ಲದೆ ಕಣ್ಣಿನ ಸಮಸ್ಯೆಯಿಂದಾಗಿ ಕೆಲಸಕ್ಕೂ ಹೋಗುತ್ತಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಸೆ. 30ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಮೇಶ್‌ ಅವರ ಪತ್ನಿ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.









































































































error: Content is protected !!
Scroll to Top