ಕ್ರಿಯೇಟಿವ್ ಕಾಲೇಜಿನ ವತಿಯಿಂದ ಬಜಗೋಳಿಯಲ್ಲಿ 7 ದಿನಗಳ ಎನ್‌ಎಸ್‌ಎಸ್ ಶಿಬಿರ

ಕಾರ್ಕಳ : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ಇಲಾಖೆ) ರಾಷ್ಟ್ರೀಯ ಸೇವಾ ಯೋಜನೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಕ್ರಿಯೇಟಿವ್‌ ಕಾಲೇಜು ವತಿಯಿಂದ ʼʼಜೀವ ವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ : ಲಿಂಗ ಸಮಾನತೆ ಸಾಧಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರ – 2024 ಅ. 2 ರಿಂದ 8 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು -ಪ್ರೌಢಶಾಲೆ ವಿಭಾಗ ಬಜಗೋಳಿಯಲ್ಲಿ ನಡೆಯಲಿದೆ.

ಅ. 2ರಂದು ಮಧ್ಯಾಹ್ನ 3 ಗಂಟೆಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿಪೂರ್ವ ಶಿಕ್ಷಣ ಇಲಾಖೆ ) ಉಡುಪಿ ಜಿಲ್ಲೆಯ ಉಪನಿರ್ದೇಶಕ ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರತಿದಿನವೂ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಿಂದ ಮೊದಲ್ಗೊಂಡು, ಶ್ರಮದಾನ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಶೈಕ್ಷಣಿಕ ಕಾರ್ಯಕ್ರಮಗಳು, ಸಂಜೆ 6ಗಂಟೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.
ಶಿಬಿರದ ಸಮಾರೋಪ ಸಮಾರಂಭ ಅ. 8ರಂದು ಮಧ್ಯಾಹ್ನ 2.30ಕ್ಕೆ ಜರುಗಲಿದೆ. ಈ ವಾರ್ಷಿಕ ವಿಶೇಷ ಶಿಬಿರದಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದಾರೆ. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು, ಬೋಧಕ ಬೋಧಕೇತರ ವೃಂದದವರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರೌಢಶಾಲಾ ವಿಭಾಗ, ಮುಡಾರು ಬಜಗೋಳಿಯ ಸಂಚಾಲಕರು, ಮುಖ್ಯ ಶಿಕ್ಷಕರು, ಶಿಕ್ಷಕೇತರ ವೃಂದ, ಶಾಲಾ ವಿದ್ಯಾರ್ಥಿ ವೃಂದ, ಪೋಷಕ ವೃಂದ, ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿ, ಊರ ನಾಗರಿಕರು ಶಿಬಿರದ ಯಶಸ್ಸಿಗೆ ಸಹಕರಿಸಲಿದ್ದಾರೆ ಎಂದು ಕಾಲೇಜು ಪ್ರಕಟನೆಯಲ್ಲಿ ತಿಳಿಸಿದೆ





























































































































error: Content is protected !!
Scroll to Top