ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರನಿಗೆ ಗಾಯ

ಕಾರ್ಕಳ : ಅಯ್ಯಪ್ಪನಗರ ಸಮೀಪ ಕೊಡಿಯಾಲ್‌ಬೈಲ್‌ನಲ್ಲಿ ಆಟೋರಿಕ್ಷಾ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ರಮೇಶ ಎಂಬವರು ಗಾಯಗೊಂಡ ಘಟನೆ ಅ. 9ರಂದು ಬೆಳಗ್ಗೆ ಸಂಭವಿಸಿದೆ.
ಸುಕೇಶ ಎಂಬವರು ಅತಿವೇಗ ಹಾಗೂ ಅಜಾಗರೂಕತೆಯಿಂದ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿರುವಾಗ ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿ ಸವಾರ ರಮೇಶ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















































error: Content is protected !!
Scroll to Top