ದೆಹಲಿ : ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ.
ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದರೆ, ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನ ನವೆಂಬರ್ 20 ರಂದು ನಿಗದಿಯಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ






























































