ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ದಿನೇಶ್ ಎಂ. (34) ನೇಣಿಗೆ ಶರಣಾದವರು. ಇವರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ಕೆಲಸಕ್ಕೆ ರಾಜಿನಾಮೆ ನೀಡಿ ಮನೆಯಲ್ಲಿದ್ದು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದರು. ಯಾವುದೋ ಕಾರಣದಿಂದ ಮಾನಸಿಕವಾಗಿ ಜೀವನದಲ್ಲಿ ನೊಂದು ಅ. 13ರ ರಾತ್ರಿ 10 ಗಂಟೆಯಿಂದ ಅ. 14ರ ಬೆಳಿಗ್ಗೆ 5:30 ಗಂಟೆಯ ಮಧ್ಯೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಮಣ್ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ































