ನಟ ಸುದೀಪ್‌ ತಾಯಿ ಸರೋಜಾ ನಿಧನ

ಬೆಂಗಳೂರು : ಜನಪ್ರಿಯ ನಟ ಕಿಚ್ಚ ಸುದೀಪ್ ಅವರ ತಾಯಿ ಮಂಗಳೂರು ಮೂಲದ ಸರೋಜಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆ.ಪಿ. ನಗರ ನಿವಾಸಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7 ಗಂಟೆಗೆ ನಿಧನರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಸುದೀಪ್‌ ಹೋಗಿದ್ದರು.
ಸುದೀಪ್​ ಅವರ ತಾಯಿ ಮಂಗಳೂರು ಮೂಲದವರು, ವಿಕ್ರಾಂತ್ ರೋಣ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು.

















































error: Content is protected !!
Scroll to Top