ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಮೃತ್ಯು

ಕಾರ್ಕಳ : ಕುಕ್ಕುಂದೂರು ಗ್ರಾಮದ ಸುಂದರಿ (52) ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಅ.19ರಂದು ಮೃತಪಟ್ಟಿರುತ್ತಾರೆ.
ರಕ್ತದೊತ್ತಡ, ಎದೆನೋವು, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಅವರು ಈ ಬಗ್ಗೆ ವೈದ್ಯರಿಂದ ಚಿಕಿತ್ಸೆ ಪಡೆಯದೇ, ಮೆಡಿಕಲ್‌ನಿಂದ ಔಷಧಿ ಪಡೆದುಕೊಳ್ಳುತ್ತಿದ್ದರು. ಶನಿವಾರದಂದು ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಸುಂದರಿಯವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಸುಂದರಿಯವರ ಮಗ ದಿವಾಕರ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.









































































































error: Content is protected !!
Scroll to Top