ಕಾರ್ಕಳ : ಶಿರ್ಲಾಲು ಸೂಡಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭುವನೇಂದ್ರ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶೇಕ್ ರಿಂಶಾ ಅವರು ಬಾಲಕಿಯರ ವಿಭಾಗದ ಗುಂಡೆಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಶ್ರೇಯಾಂಕ್ ಆಚಾರ್ಯ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ಗುಂಡೆಸೆತದಲ್ಲಿ 7ನೇ ತರಗತಿ ವಿದ್ಯಾರ್ಥಿ ಪ್ರಕಾಶ್ ಪಾಟೀಲ್ ಅವರು ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮತ್ತು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.
ಗುಂಡೆಸೆತ – ಭುವನೇಂದ್ರ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
































































