ವ್ಯಕ್ತಿಯ ಅನುಮಾನಾಸ್ಪದ ಸಾವಿನ ಹಿನ್ನೆಲೆ ಬಯಲು – ಪತ್ನಿಯಿಂದಲೇ ಕೊಲೆಯ ಶಂಕೆ

ಕಾರ್ಕಳ : ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ (44) ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದು ಅ. 20ರಂದು ಮೃತಪಟ್ಟಿರುತ್ತಾರೆ. ಆದರೆ, ಈ ಸಾವು ಕೊಲೆ ಎಂದು ಅನುಮಾನ ವ್ಯಕ್ತವಾದ ಹಿನ್ನೆಲೆ ವಿಚಾರಣೆ ನಡೆಸಿದ ಅಜೆಕಾರು ಪೊಲೀಸರು ಬಾಲಕೃಷ್ಣ ಅವರ ಪತ್ನಿ ಪ್ರತಿಮಾ ಹಾಗೂ ಕಾರ್ಕಳದ ದಿಲೀಪ್‌ ಹೆಗ್ಡೆ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಬಾಲಕೃಷ್ಣ ಮತ್ತು ಪತ್ನಿ ಪ್ರತಿಮಾ

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 1 ವಾರ ಕಾಲ ಚಿಕಿತ್ಸೆ ನೀಡಿದ ಬಳಿಕ ವೈದ್ಯಾದಿಕಾರಿಯವರು ಬಾಲಕೃಷ್ಣ ಅವರನ್ನು ಉದ್ಯಾವರ ಅಥವಾ ಅಂಕೋಲಾ ಆಯರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ತಿಳಿಸಿರುತ್ತಾರೆ. ಅದರಂತೆ ಅ. 19ರಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಬಾಲಕೃಷ್ಣ ಅವರು ರಾತ್ರಿ 10 ಗಂಟೆಗೆ ಅಜೆಕಾರು ದೆಪ್ಪುತ್ತೆಯಲ್ಲಿರುವ ತಮ್ಮ ಮನೆಗೆ ಬಂದಿರುತ್ತಾರೆ. ಆದರೆ, ಅ. 20ರಂದು ಮುಂಜಾನೆ ಬಾಲಕೃಷ್ಣ ಮೃತಪಟ್ಟಿದ್ದರು. ಸಾವಿನ ಕುರಿತು ಅನುಮಾನಗೊಂಡ ಬಾಲಕೃಷ್ಣ ಅವರ ತಂದೆ ಅಜೆಕಾರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ವಿಚಾರಣೆ ನಡೆಸಿದ ಪೊಲೀಸರು ಕೊಲೆಯ ಶಂಕೆಯ ಹಿನ್ನೆಲೆಯಲ್ಲಿ ಬಾಲಕೃಷ್ಣ ಅವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಎಂದು ಹೇಳಲಾಗುತ್ತಿರುವ ಕಾರ್ಕಳದ ದಿಲೀಪ್‌ ಹೆಗ್ಡೆಯವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.















































error: Content is protected !!
Scroll to Top