ಜ್ಞಾನಸುಧಾದ ಗಣೇಶ್ ಪ್ರಸಾದ್‌ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಾರ್ಕಳ : ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು ಗಣೇಶ್ ಪ್ರಸಾದ್‌ ಅವರು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ.) ಬೆಂಗಳೂರು ಇವರು ಕೊಡಮಾಡುವ ರಾಜ್ಯ ಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೈಕ್ಷಣಿಕ ಸಾಮಾಜಿಕ ಮತ್ತು ಸಾಹಿತ್ಯಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಯಕ್ಷಗಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಈ ಎಲ್ಲಾ ಸಾಧನೆಯನ್ನು ಗುರುತಿಸಿ, ರಾಜ್ಯಮಟ್ಟದ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಖಾಸಗಿ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸುರೇಶ್‌ ಗೊಲ್ಲಾ ತಿಳಿಸಿದ್ದಾರೆ. ಬೆಂಗಳೂರಿನ ಜ್ಞಾನ ಭಾರತಿ ಆವರಣದ ಪ್ರೊ. ವೆಂಕಟಗಿರಿ ಗೌಡ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಣೇಶ್ ಪ್ರಸಾದ್‌ ಕೊಡಿಬೆಟ್ಟು ದಿ. ದೇವದಾಸ್ ನಾಯಕ್ ಹಾಗೂ ಡಿ. ಶಾಂತ ನಾಯಕ್‌ ದಂಪತಿ ಪುತ್ರ. ಪ್ರಶಸ್ತಿ ಪುರಸ್ಕೃತ ಉಪನ್ಯಾಸಕರನ್ನು ಅಜೆಕಾರ್ ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.











































































error: Content is protected !!
Scroll to Top