ವಕ್ಫ್‌ ನೋಟಿಸ್‌ ಭೀತಿ : ಹಾವೇರಿಯಲ್ಲಿ ಮನೆಗಳಿಗೆ ಕಲ್ಲು ತೂರಾಟ

ಹಾವೇರಿ: ವಿಜಯಪುರ, ಕಲಬುರಗಿ, ಮಂಡ್ಯ ಬಳಿಕ ಹಾವೇರಿ ಜಿಲ್ಲೆಯಲ್ಲೂ ರೈತರಿಗೆ ವಕ್ಫ್ ಬೋರ್ಡ್​ ನೋಟಿಸ್ ಬರಲಾರಂಭಿಸಿದ್ದು, ಇದನ್ನು ಪ್ರತಿಭಟಿಸಿ ನಿನ್ನೆ ರಾತ್ರಿ ಮುಸ್ಲಿಮ್‌ ಮುಖಂಡರ ಮನೆಗೆ ಕಲ್ಲು ತೂರಾಟ ಮಾಡಲಾಗಿದೆ. ಬುಧವಾರ ರಾತ್ರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್​ ಬೋರ್ಡ್​​ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಜನರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ.
ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಮನೆ ಮುಂದಿದ್ದ ಬೈಕನ್ನು ಜಖಂಗೊಳಿಸಿದೆ. ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್​ಪಿ ಅಂಶುಕುಮಾರ್ ಕಡಕೋಳ ಗ್ರಾಮಕ್ಕೆ ದೌಡಾಯಿಸಿ ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದ್ದಾರೆ. ಸದ್ಯ ಸವಣೂರು ತಾಲೂಕಿನ ಕಡಕೋಳ ಗ್ರಾಮ ಬೂದಿಮುಚ್ಚಿದ ಕೆಂಡದಂತಿದೆ.
ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಗಲಾಟೆಗೆ ಸಂಬಂಧಿಸಿದಂತೆ ದೂರು ಕೊಡಲು ಯಾರೂ ಸಿದ್ಧರಿಲ್ಲ. ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇವೆ ಎಂದು ಎಸ್‌ಪಿ ತಿಳಿಸಿದ್ದಾರೆ. ಹಲ್ಲೆಗೊಳಗಾದವರಿಂದ ಮಾಹಿತಿ ಪಡೆದು ದೂರು ಸ್ವೀಕರಿಸುತ್ತೇವೆ. ಗಲಾಟೆಗೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ 4 ಕೆಎಸ್​ಆರ್​ಪಿ ತುಕಡಿ, 200 ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್​ಮಾರ್ಚ್ ಮಾಡಲಾಗುತ್ತದೆ. ಗಲಾಟೆಯಲ್ಲಿ ದುಷ್ಕರ್ಮಿಗಳು ಕೆಲವರ ಮನೆಗಳ ಕಿಟಿಕಿ ಗಾಜು ಒಡೆದಿದ್ದಾರೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹಲ್ಲೆಗೊಳಗಾದವರಿಗೆ ಎಕ್ಸ್​ರೇ ಮಾಡಿಸುತ್ತೇವೆ ಎಂದು ಎಸ್​ಪಿ ಅಂಶುಕುಮಾರ್ ಹೇಳಿದ್ದಾರೆ.









































































































error: Content is protected !!
Scroll to Top