ಸ್ಕೂಟಿಗೆ ಕಾರು ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಸ್ಕೂಟಿಗೆ ಕಾರು ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ನ. 5ರಂದು ಅತ್ತೂರು ಚರ್ಚ್‌ ಸಮೀಪ ಸಂಭವಿಸಿದೆ. ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹಿಂದುಗಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಸ್ಕೂಟಿ ಸವಾರ ರಸ್ತೆಗೆ ಬಿದ್ದಿದ್ದು ತಲೆ ಮತ್ತು ಮುಖಕ್ಕೆ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಕೂಟಿ ನಜ್ಜುಗುಜ್ಜಾಗಿದೆ.

































































































































































error: Content is protected !!
Scroll to Top