ಗ್ರಾ. ಪಂ. ಉಪಚುನಾವಣೆಗೆ ವೇಳಾ ಪಟ್ಟಿ ಪ್ರಕಟ

ಉಡುಪಿ : ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮೊದಲಾದ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನ. 23ರಂದು ನಡೆಯಲಿದೆ.

ಕಾರ್ಕಳ ತಾಲೂಕಿನ ಈದು ಗ್ರಾ.ಪಂ.ನ 1 ಸ್ಥಾನ, ನಲ್ಲೂರು ಗ್ರಾ.ಪಂ. ನ 1 ಸ್ಥಾನ, ನಿಟ್ಟೆ ಗ್ರಾ.ಪಂ.ನ 1 ಸ್ಥಾನ, ನೀರೆ ಗ್ರಾ.ಪಂ.ನ 3 ಸ್ಥಾನ, ಕೆರ್ವಾಶೆ ಗ್ರಾ.ಪಂ.ನ 1 ಸ್ಥಾನ ಹಾಗೂ ಕಡ್ತಲ ಗ್ರಾ.ಪಂ.ನ 1 ಸದಸ್ಯ ಸ್ಥಾನಗಳಿಗೆ, ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾ.ಪಂ.ನ 1 ಸ್ಥಾನ, ಬ್ರಹ್ಮಾವರ ತಾಲೂಕಿನ ಕೋಟ ಗ್ರಾ.ಪಂ.ನ 1 ಸ್ಥಾನ, ಉಡುಪಿ ತಾಲೂಕಿನ ಬೊಮ್ಮರ ಬೆಟ್ಟು ಗ್ರಾ.ಪಂ.ನ 1 ಸ್ಥಾನ, 13-ಕೊಡಿಬೆಟ್ಟು ಗ್ರಾ.ಪಂ.ನ 1 ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ.

ನಾಮಪತ್ರ ಸಲ್ಲಿಸಲು 2024 ರ ನ. 6 ರಿಂದ ಪ್ರಾರಂಭವಾಗಲಿದೆ. ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ನ. 13 ರಂದು ನಾಮಪತ್ರಗಳ ಪರಿಶೀಲನೆ, ನ. 15 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನ. 23ರ ಶನಿವಾರದಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ನ. 25 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆಯು ನ. 26 ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕಿನ ಕೇಂದ್ರ ಸ್ಥಳಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.





























































































































error: Content is protected !!
Scroll to Top