ಜ್ಞಾನಸುಧಾ : 10ನೇ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ

ಕಾರ್ಕಳ : ದೇಶದ ಯುವ ಪೀಳಿಗೆಯನ್ನು ಸದೃಢ ನಾಯಕರನ್ನಾಗಿ ರೂಪಿಸಲು ರಚಿಸಿರುವ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಶಿಬಿರಗಳಲ್ಲಿ ಭಾಗವಹಿಸುವುದು ಅಪರೂಪದ ಅವಕಾಶ. ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಕಳದ ಬಿ.ಇ.ಓ. ಭಾಸ್ಕರ್ ಟಿ. ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿ ಪದವು ಇಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿ ಶಿಕ್ಷಣ ನೈಜ ಶಿಕ್ಷಣ – ಸವಿತಾ ಎರ್ಮಾಳ್
ಶಿಬಿರದ ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಮಾತನಾಡಿ, ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳನ್ನು ಪ್ರಕೃತಿ ಶಿಕ್ಷಣಗಳೊಂದಿಗೆ ಕಲಿಸುವ ಮಾಧ್ಯಮ. ಜ್ಞಾನಸುಧಾದ ಎನ್.ಎಸ್.ಎಸ್. ಈ ನಿಟ್ಟಿನಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತ 10ನೇ ಶಿಬಿರವನ್ನು ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಡಾ. ಸುಧಾಕರ ಶೆಟ್ಟಿ ಸಮಾಜಕ್ಕೆ ಮಾದರಿ : ನವೀನ್ ನಾಯಕ್
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶಿಕ್ಷಣವನ್ನು ನೀಡುತ್ತ ಮೌಲ್ಯಸುಧಾದಂತಹ ಮೌಲ್ಯಯುಕ್ತ ಕಾರ್ಯಕ್ರಮಗಳನ್ನು ನೀಡುತ್ತ, ಸಮಾಜದ ಆಶೋತ್ತರಗಳಿಗಾಗಿ ಮಿಡಿದು ಪ್ರತಿಷ್ಠಿತ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಡಾ.ಸುಧಾಕರ ಶೆಟ್ಟಿಯವರು ಸಮಾಜಕ್ಕೆ ಮಾದರಿ ಎಂದು ಉದ್ಯಮಿ ನವೀನ್ ನಾಯಕ್ ಹೇಳಿದರು.

ನಿಟ್ಟೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಶೋಭಾ ಶಿಬಿರದ ಧ್ವಜಾರೋಹಣ ನೆರವೇರಿಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಓ. ದಿನೇಶ್ ಎಂ. ಕೊಡವೂರು ಸಂಸ್ಥೆಯ ಕೀರ್ತಿಗೆ ತಕ್ಕಹಾಗೆ ಶಿಬಿರವನ್ನು ಸಂಪನ್ನಗೊಳಿಸಿ ಎಂದು ಶುಭ ಹಾರೈಸಿದರು.
ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪ. ಪೂ. ಕಾಲೇಜಿನ ಉಪ ಪ್ರಾಂಶುಪಾಲ ಉಷಾ ರಾವ್ ಯು., ಸಂಸ್ಥೆಯ ಪಿ.ಆರ್.ಓ. ಜ್ಯೋತಿ ಪದ್ಮನಾಭ ಭಂಡಿ, ಕಲಂಬಾಡಿ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಬಿ., ಶಾಲಾ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ ಸುರೇಶ್ ಆಚಾರ್ಯ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸಂಗೀತಾ ಬಿ.ಎನ್., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೂಪೇಶ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ರವಿ ಜಿ. ಸ್ವಾಗತಿಸಿ, ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿದರು.





























































































































error: Content is protected !!
Scroll to Top