ಕ್ರಿಯೇಟಿವ್ ಸಂಸ್ಥೆಯಲ್ಲಿ ಖೇಲೋ ಕ್ರಿಯೇಟಿವ್ -2024

ಕಾರ್ಕಳ : ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಕೇವಲ ಕಲಿಕೆ ಮಾತ್ರವಲ್ಲದೆ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ. ಆದ್ದರಿಂದ ಪ್ರತಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವನೆಯಿಂದ ಭಾಗವಹಿಸಿದಾಗ ಕಾರ್ಯಕ್ರಮದ ಉದ್ದೇಶ ಸಾರ್ಥಕವಾಗುತ್ತದೆ ಎಂದು ಕ್ರಿಯೇಟಿವ್‌ ಸಂಸ್ಥೆಯ ಸಹ ಸಂಸ್ಥಾಪಕ ಅಶ್ವತ್‌ ಎಸ್. ಎಲ್. ಅಭಿಪ್ರಾಯಪಟ್ಟರು.
ಅವರು ನ. 1ರಂದು ಕ್ರಿಯೇಟಿವ್‌ ಕಾಲೇಜಿನಲ್ಲಿ ನಡೆದ ʼಖೇಲೋ ಕ್ರಿಯೇಟಿವ್ -2024ʼ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಉಪನ್ಯಾಸಕ ವರ್ಗದವರು, ನಿಲಯ ಪಾಲಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು ವಿವಿಧ ತಂಡಗಳನ್ನಾಗಿ ವಿಂಗಡಿಸಿ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್ ಮುಂತಾದ ಕ್ರೀಡಾ ಚಟುವಟಿಕೆಗಳು ನಡೆಯಿತು.





























































































































error: Content is protected !!
Scroll to Top