ಹೆಬ್ರಿ : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ , ಅಕ್ಷರ ಸಾಹಿತ್ಯ ಸಂಘ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಹೆಬ್ರಿ ಘಟಕ, ಜೇಸಿಐ ಹೆಬ್ರಿ ಇವರ ಸಹಭಾಗಿತ್ವದಲ್ಲಿ ಶಾಲಾ ಸಭಾಂಗಣದಲ್ಲಿ ನ. 6ರಂದು ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ನಡೆಯಿತು.
ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಜಯೇಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಲಯನ್ಸ್ ಕ್ಲಬ್ ಅಧ್ಯಕ್ಷ ನಾಗೇಶ ನಾಯಕ್ ದೀಪ ಬೆಳಗಿಸಿದ ಕಾರ್ಯಕ್ರಮ ಉದ್ಘಾಟಿಸಿದರು.
ಕನ್ನಡ ನಾಡು ನುಡಿಯ ಬಗ್ಗೆ ಪ್ರಧಾನ ಭಾಷಣ ಮಾಡಿದ ನವೀನ್ ಶೆಟ್ಟಿ ಮಡಾಮಕ್ಕಿ, ಕನ್ನಡ ಭಾಷೆ ಮತ್ತು ಸಂಸ್ಕೃತಿ ಸತ್ವಯುತವಾದುದು. ಪ್ರಾಚೀನ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಕನ್ನಡ ನಾಡು ನುಡಿ ನಮ್ಮ ಹೆಮ್ಮೆ. ಕನ್ನಡದ ಕುರಿತು ಅಭಿಮಾನದ ಜೊತೆ ಕನ್ನಡಕ್ಕಾಗಿ ಕೆಲಸ ಮಾಡುವ ಮನಸ್ಸು ಬೇಕು. ವಿದ್ಯಾರ್ಥಿಗಳಲ್ಲಿ ಕನ್ನಡದ ಪ್ರೀತಿಯನ್ನು ಬೆಳೆಸುವಲ್ಲಿ ಯಶಸ್ವಿಯಾದರೆ ಮಾತ್ರ ಭಾಷೆ ಬೆಳೆಯುತ್ತದೆ ಎಂದರು.
ಸನ್ಮಾನ
ನವೀನ್ ಶೆಟ್ಟಿ ಮಡಾಮಕ್ಕಿ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ ಪೂರ್ಣ ಅಂಕಗಳನ್ನು ಪಡೆದ ಲಾವಣ್ಯ, ಸುಶ್ಮಿತ ಹಾಗೂ ಪನ್ನಿಧಿ ಅವರನ್ನು ಗೌರವಿಸಲಾಯಿತು.

ಹೆಬ್ರಿಯ ಸೀನಿಯರ್ ಚೇಂಬರ್‌ನ ಅಧ್ಯಕ್ಷ ಪ್ರಕಾಶ ಶೆಟ್ಟಿ, ಹೆಬ್ರಿ ಜೇಸಿಐ ಅಧ್ಯಕ್ಷೆ ರಕ್ಷಿತಾ ಪಿ. ಭಟ್, ಟಿ. ಜಿ. ಆಚಾರ್ಯ, ರಘುರಾಮ ಶೆಟ್ಟಿ, ಆಶಾ, ವಕೀಲ ಕೃಷ್ಣ ಶೆಟ್ಟಿ, ಉಪಪ್ರಾಂಶುಪಾಲ ದಿವಾಕರ ಮರಕಾಲ ಎಸ್., ಅಕ್ಷರ ಸಾಹಿತ್ಯ ಸಂಘದ ಅಧ್ಯಕ್ಷ ಶ್ರೀ ನಿತಾ ಉಪಸ್ಥಿತರಿದ್ದರು.
ಅಕ್ಷರ ಸಾಹಿತ್ಯ ಸಂಘದ ಸಂಚಾಲಕ ಮಂಜುನಾಥ ಕುಲಾಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷರ ಸಾಹಿತ್ಯ ಸಂಘದ ಉಪಾಧ್ಯಕ್ಷೆ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೆಂಕಟರಮಣ ಕಲ್ಕೂರ್ ವಂದಿಸಿದರು. ಅಧ್ಯಾಪಕಿ ಸಂಗೀತಾ ಶೆಟ್ಟಿ ಸಹಕರಿಸಿದರು































































