ಚದುರಂಗ ಸ್ಪರ್ಧೆ – ಉಡುಪಿ ಜ್ಞಾನಸುಧಾ ವಿದ್ಯಾರ್ಥಿ ರಾಷ್ಟ್ರ ಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ನಿಖಿಲ್ ವಿಕ್ರಮ್‌ ಕೆ. ಎಸ್. ದ್ವಿತೀಯ ಸ್ಥಾನ ಗಳಿಸಿ ಕೊಲ್ಕತ್ತದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಡಾ. ಕೆ. ಶ್ರೀಧರ ಪ್ರಸಾದ್‌ ಕಡೂರ್‌ ಮತ್ತು ವೀಣಾ ಎಸ್. ಪ್ರಸಾದ್ ದಂಪತಿಗಳ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.































































































































error: Content is protected !!
Scroll to Top