ಅಥ್ಲೆಟಿಕ್ಸ್ ಕ್ರೀಡಾ ಕೂಟ – ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಕಾಮತ್ ರಾಜ್ಯ ಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುದೀಕ್ಷಾ ಕಾಮತ್ ಉದ್ದ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತ ಎರಡರಲ್ಲೂ ಬೆಳ್ಳಿ ಪದಕ ಪಡೆದುಕೊಳ್ಳುವುದರ ಮೂಲಕ ಸತತ ಎರಡನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.





























































































error: Content is protected !!
Scroll to Top