ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕರ್ನಾಟಕ ಸರಕಾರ, ಪದವಿ ಪೂರ್ವ ಉಪನಿರ್ದೇಶಕರ ಕಚೇರಿ, ಉತ್ತರ ಕನ್ನಡ, ಕಾರವಾರ ಹಾಗೂ ಶ್ರೀ ಮಾರಿಕಾಂಬ ಸರಕಾರಿ ಪದವಿ ಪೂರ್ವ ಕಾಲೇಜು ಶಿರಸಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶಾನ್ವಿ ಬಲ್ಲಾಳ್ ವಿಜಯಿಯಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಐದನೇ ಬಾರಿ ರಾಷ್ಟ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾದಂತಹ ಅಮೋಘ ಸಾಧನೆಯನ್ನು ಶಾನ್ವಿ ಬಲ್ಲಾಳ್ ತನ್ನದಾಗಿಸಿಕೊಂಡಿದ್ದಾರೆ. ಮುಂದೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಶಾನ್ವಿ ಬಲ್ಲಾಳ್ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಚೆಸ್ ಪಂದ್ಯಾಟ – ಕ್ರೈಸ್ಟ್‌ಕಿಂಗ್‌ನ ಶಾನ್ವಿ ಬಲ್ಲಾಳ್ ಸತತ ಐದನೇ ಬಾರಿ ರಾಷ್ಟ್ರ ಮಟ್ಟಕ್ಕೆ






























































