ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ನೊಂದ ಮಹಿಳೆ – ಆತ್ಮಹತ್ಯೆಗೆ ಶರಣು

ಕಾರ್ಕಳ : ಕೆಲಸಕ್ಕೆ ಹೋಗಲಾಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 6ರಂದು ಈದು ಗ್ರಾಮದಲ್ಲಿ ಸಂಭವಿಸಿದೆ. ಪ್ರಸನ್ನಾ (29) ನೇಣಿಗೆ ಶರಣಾದವರು.
ಪ್ರಸನ್ನಾ ಅವರು ಹೊಸ್ಮಾರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಇವರಿಗೆ 10 ತಿಂಗಳ ಹೆಣ್ಣು ಮಗುವಿದ್ದು ಗಂಡ ರಾಜೇಶ್‌ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿರುತ್ತಾರೆ. ಪ್ರಸನ್ನಾ ಆಗಾಗ ತನ್ನ ತಾಯಿಗೆ ಕರೆಮಾಡಿ ಗಂಡನ ಮನೆಯವರು ನನ್ನನ್ನು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು, ನಾನು ಕೆಲಸಕ್ಕೆ ಹೋಗಲು ಆಗುವುದಿಲ್ಲ ಎಂದು ಹೇಳುತ್ತಿದ್ದರು. ಇದೇ ಕಾರಣಕ್ಕೆ ಖಿನ್ನತೆಗೊಳಲಾಗಿದ್ದ ಪ್ರಸನ್ನಾ ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ತಾನು ಕಷ್ಟಪಟ್ಟು ಓದಿದ್ದರೂ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಮನನೊಂದು ನ. 6ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:45 ಗಂಟೆಯ ನಡುವಿನ ಅವಧಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ತಾಯಿ ಮೂಡಬಿದಿರೆಯ ಶಾರದ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.









































































































error: Content is protected !!
Scroll to Top