ಕಾರ್ಕಳ : ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ನ. 8ರಂದು ಆದೇಶ ಹೊರಡಿಸಿದೆ.
ಬಂಧಿತ ಪ್ರತಿಮಾಳನ್ನು ಪೊಲೀಸರು ಅ. 25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ. 7ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ. 28ರಂದು ಕೋರ್ಟ್ ನ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಈ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ನ. 8ರಂದು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಲಯವು ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ತೀರ್ಪು ನೀಡಿದೆ.






























































